ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ನಿಷೇಧ ವಿಧೇಯಕ ಮಂಡನೆಯಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ . ಈಗಾಗಲೇ ಹಲವು ಮಠಾಧೀಶರು ಮತಾಂತರ ನಿಷೇಧ ಕಾಯ್ದೆ ಜಾರಿಗೆ ಆಗ್ರಹಿಸಿದ್ದಾರೆ . ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಕೆಲ ಸಚಿವರು ಕೂಡ ಬೆಳಗಾವಿ ಅಧಿವೇಶನದಲ್ಲಿ ಮತಾಂತರ ನಿಷೇಧ ಕಾಯ್ದೆ ಜಾರಿ ಮಾಡುವುದಾಗಿ ಹೇಳಿದ್ದಾರೆ . ಹಾಗಾಗಿ , ಈ ಬಾರಿಯ ಅಧಿವೇಶನದಲ್ಲಿ ಮಸೂದೆ ಮಂಡನೆಯಾಗುವ ಸಾಧ್ಯತೆ ಇದೆ ಎನ್ನಲಾಗ್ತಿದೆ . ಒಂದು ವೇಳೆ ಮತಾಂತರ ನಿಷೇಧ ವಿಧೇಯಕ ಮಂಡನೆಯಾಗಿ ಅಂಗೀಕಾರಗೊಂಡು ಕಾನೂನು ಆಗಿ ಜಾರಿಗೆ ಬಂದರೆ , ರಾಜ್ಯದಲ್ಲಿ ಬಲವಂತದ ಮತಾಂತರ ವಿರುದ್ಧ ಕಠಿಣ ಕ್ರಮ ಜರುಗಳಿದೆ.ಡಿಸೆಂಬರ್ 13 ರಿಂದ 23 ರವರೆಗೆ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಯಲಿದೆ .
ಬೆಳಗಾವಿಯಲ್ಲಿ ನಡೆಯಲಿರುವ ವಿಧಾನಮಂಡಲದ ಚಳಿಗಾಲದ ಅಧಿವೇಶನದಲ್ಲಿ ಮತಾಂತರ ನಿಷೇಧ ವಿಧೇಯಕ
byಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ
-
0