ರೈತ ಮಕ್ಕಳಿಗೆ ನೇರ ಹಣ

ರೈತರ ಮಕ್ಕಳಿಗೆ ಶಿಕ್ಷಣ ವಿದ್ಯಾರ್ಥಿವೇತನ ನೀಡುವ ನಿಯಮಗಳಿಗೆ ರಾಜ್ಯ ಸರ್ಕಾರ ಮಹತ್ವದ ತಿದ್ದುಪಡಿ ತಂದಿದೆ . ವಿದ್ಯಾರ್ಥಿಗಳು ಬೇರೆ ವಿದ್ಯಾರ್ಥಿ ವೇತನ ಪಡೆಯುತ್ತಿದ್ದರೂ ಕೂಡ ' ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನ ಪಡೆಯಬಹುದಾಗಿದೆ . ಹೊಸದಾಗಿ ಹೊರಡಿಸಿರುವ ಆದೇಶದಂತೆ ವಿವಿಧ ಇಲಾಖೆಗಳಲ್ಲಿ ಲಭ್ಯವಿರುವ ಮಾಹಿತಿ ಆಧರಿಸಿ ಕರ್ನಾಟಕ ರೈತ ಮಕ್ಕಳ ವಿದ್ಯಾರ್ಥಿವೇತನ ಯೋಜನೆಗೆ ಅರ್ಹರಾಗಿರುವ ವಿದ್ಯಾರ್ಥಿಗಳನ್ನು ಸರ್ಕಾರ ಗುರುತಿಸುತ್ತದೆ . ಅವರಿಗೆ ಉನ್ನತ ಶಿಕ್ಷಣಕ್ಕಾಗಿ ಆರ್ಥಿಕ ನೆರವು ನೀಡುತ್ತದೆ . ವಿದ್ಯಾರ್ಥಿಗಳು ಸಲ್ಲಿಸಿದ ಅರ್ಜಿಗಳನ್ನು ಸ್ಕಾಲರ್‌ಶಿಪ್‌ಗಾಗಿ ಪರಿಗಣಿಸಲಾಗುತ್ತದೆ , ಇದರಲ್ಲಿ ಹಣವನ್ನು ನೇರವಾಗಿ ಅವರ ಬ್ಯಾಂಕ್ ಖಾತೆಗಳಿಗೆ ವರ್ಗಾಯಿಸಲಾಗುತ್ತದೆ . ರೈತರ ಮಕ್ಕಳಿಗೆ ಉನ್ನತ ಶಿಕ್ಷಣ ಪಡೆಯಲು ಸಹಕಾರಿಯಾಗುವ ಸಲುವಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನವನ್ನು ಘೋಷಿಸಿದರು . ಈ ಯೋಜನೆಗೆ 1,000 ಕೋಟಿ ಮೀಸಲಿಡಲಾಗುತ್ತದೆ . ಯೋಜನೆ ಸೌಲಭ್ಯ ಪಡೆಯಲು raitamitra.karnataka.gov.in ವೆಬ್‌ಸೈಟ್‌ನಲ್ಲಿ ಅರ್ಜಿ ಸಲ್ಲಿಸಬಹುದು .

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು