ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ರಾಜ್ಯದ ಕೆಲವು ಭಾಗಗಳಲ್ಲಿ ಮುಂದಿನ ಎರಡು ಮೂರು ದಿನ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ . ಜವಾದ್ ಚಂಡಮಾರುತದ ಪರಿಣಾಮ ರಾಜ್ಯದ ಹಲವು ಜಿಲ್ಲೆಗಳಲ್ಲಿ , ದಕ್ಷಿಣ ಒಳನಾಡು , ಕರಾವಳಿ ಹಾಗೂ ಮಲೆನಾಡು ಭಾಗದ ಕೆಲವೆಡೆ ಮುಂದಿನ ಮೂರು ನಾಲ್ಕು ದಿನಗಳ ಕಾಲ ತುಸು ಮಳೆಯಾಗುವ ಸಾಧ್ಯತೆಯಿದೆ . ಇಂದು ಆಂಧ್ರಪ್ರದೇಶ ಮತ್ತು ಒಡಿಶಾದಲ್ಲಿಜವಾದ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು , ಪರಿಣಾಮ ರಾಜ್ಯದಲ್ಲಿ ಡಿ .6 ರವರೆಗೆ ಅಲ್ಲಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ .