ರಾಜ್ಯದಲ್ಲಿ ಕೊಂಚ ಬಿಡುವು ಮಾಡಿಕೊಂಡಿದ್ದ ಮಳೆರಾಯ ಮತ್ತೆ ಅಬ್ಬರಿಸುವ ಸಾಧ್ಯತೆ ಇದೆ . ಇನ್ನೆರಡು ದಿನ ರಾಜ್ಯದ ಉತ್ತರ ಒಳನಾಡಿನಲ್ಲಿ ಒಣ ಹವೆ ಇರಲಿದೆ . ಕರಾವಳಿಯ ದಕ್ಷಿಣ ಕನ್ನಡ , ಉಡುಪಿ ಹಾಗೂ ಉತ್ತರ ಕನ್ನಡದ ಕೆಲ ಪ್ರದೇಶಗಳಲ್ಲಿ ಮುಂದಿನ ನಾಲ್ಕು ದಿನಗಳಲ್ಲಿ ಮಳೆಯಾಗಲಿದೆ . ಉತ್ತರ ಕನ್ನಡದಲ್ಲಿ ಒಣ ಹವೆ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ . ಇನ್ನು ಮಳೆ ಕಡಿಮೆಯಾಗುತ್ತಿದ್ದಂತೆ ಚಳಿ ಶುರುವಾಗಿದ್ದು , ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಚಳಿಯ ಪ್ರಮಾಣ ಹೆಚ್ಚಾಗುವ ಸಾಧ್ಯತೆ ಇದೆ .