ಕೆ.ಎಸ್ ಈಶ್ವರಪ್ಪ ಮೇಲೆ ಭ್ರಷ್ಟಾಚಾರ ಆರೋಪ ಮಾಡಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ . ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಬೆಳಗಾವಿಯ ಮಾಜಿ ಜಿಲ್ಲಾ ಪಂಚಾಯತ್ ಅಧ್ಯಕ್ಷೆ ಆಶಾ ಐಹೊಳೆ ಬರೆದಿದ್ದ ಪತ್ರ ದೊರೆತಿದೆ . 2021 ರ ಫೆಬ್ರವರಿ 15 ರಂದು ಆಶಾ ಐಹೊಳೆ ಪಂಚಾಯತ್ ರಾಜ್ ಇಲಾಖೆಗೆ ಪತ್ರ ಬರೆದಿದ್ದು , ಹಿಂಡಲಗಾ ಗ್ರಾಮದಲ್ಲಿ ರಸ್ತೆ , ಚರಂಡಿ ಅಭಿವೃದ್ಧಿಗೆ ವಿಶೇಷ ಅನುದಾನ ಮಂಜೂರು ಮಾಡುವಂತೆ ಪತ್ರದಲ್ಲಿ ಕೋರಲಾಗಿತ್ತು .108 ಕಾಮಗಾರಿಗಳ ಪಟ್ಟಿ ಸಮೇತ ಆಶಾ ಐಹೊಳೆ ಆರ್‌ಡಿಪಿಆರ್‌ಗೆ ಪತ್ರ ಬರೆದಿದ್ದರು ಎಂಬ ಮಾಹಿತಿ ದೊರೆತಿದೆ . ಇನ್ನು ಪತ್ರದ ಮೇಲೆ ಅನುಮೋದನೆಗೆ ಆದೇಶ ನೀಡಲಾಗಿದೆ ಎಂದು ಸಹಿ ಮಾಡಲಾಗಿದೆ . ಆದೇಶದ ಪ್ರತಿಗಳನ್ನು ಮಾರ್ಚ್ 5 ರಂದು ನೀಡಲಾಗುವುದು ಎಂದು ಕೈಬರಹದಲ್ಲಿ ಬರೆದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್‌ರಾಜ್ ಇಲಾಖೆಯ ಸೀಲ್ ಕೂಡ ಹಾಕಲಾಗಿದೆ ಎಂದು ಹೇಳಲಾಗಿದೆ . ಸಂತೋಷ್ ಪಾಟೀಲ್ ಮಾಡಿರುವ ಆರೋಪ ಸುಳ್ಳು . ಅವರಿಗೆ ನಾವು ಯಾವುದೇ ಹಣ ಕೊಡಲು ಬಾಕಿ ಇಲ್ಲ . ನಾವು ಯಾವುದೇ ಕಾಮಗಾರಿಗೆ ಅನುಮೋದನೆ ಕೊಟ್ಟಿಲ್ಲ ಎಂದು ಸಚಿವರಾಗಿದ್ದ ಈಶ್ವರಪ್ಪ ಹೇಳಿದ್ದರು .
ಕೆ.ಎಸ್ ಈಶ್ವರಪ್ಪ ಮೇಲೆ ಭ್ರಷ್ಟಾಚಾರ ಆರೋಪ ಮಾಡಿ ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ .
byಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ
-
0