ಬೆಂಗಳೂರು, ಏಪ್ರಿಲ್ 24; ಉದ್ಯಾನ ನಗರಿ ಬೆಂಗಳೂರಿನಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 100ರ ಗಡಿ ದಾಟಿದೆ. ಮಾರ್ಚ್ 18ರ ಬಳಿಕ ನಗರದಲ್ಲಿ ಹೊಸ ಕೋವಿಡ್ ಪ್ರಕರಣಗಳ ಸಂಖ್ಯೆ 100ಕ್ಕಿಂತ ಹೆಚ್ಚಾಗಿದೆ.
ಶನಿವಾರದ ಹೆಲ್ತ್ ಬುಲೆಟಿನ್ ಪ್ರಕಾರ ಬೆಂಗಳೂರು ನಗರ ಜಿಲ್ಲೆಯಲ್ಲಿ 132 ಹೊಸ ಕೋವಿಡ್ ಪ್ರಕರಣ ದಾಖಲಾಗಿದೆ. ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ1601. ಒಟ್ಟು ಪ್ರಕರಣಗಳ 1782879. 24 ಗಂಟೆಯಲ್ಲಿ 3878 ಮಾದರಿಗಳ ಪರೀಕ್ಷೆಗಳನ್ನು ಮಾಡಲಾಗಿದೆ.
ಭಾರತದಲ್ಲಿ ಸತತ ನಾಲ್ಕನೇ ದಿನವೂ 2,000ಕ್ಕಿಂತ ಹೆಚ್ಚು ಕೋವಿಡ್ ಕೇಸ್
ಹೆಲ್ತ್ ಬುಲೆಟಿನ್ ಪ್ರಕಾರ ಕರ್ನಾಟಕದಲ್ಲಿ ಪತ್ತೆಯಾದ ಹೊಸ ಪ್ರಕರಣಗಳು 139. ಇದರಲ್ಲಿ 132 ಪ್ರಕರಣಗಳು ಬೆಂಗಳೂರಿನಲ್ಲಿಯೇ ದಾಖಲಾಗಿವೆ. ಉಳಿದಂತೆ ಚಿತ್ರದುರ್ಗ 2, ಚಿಕ್ಕಮಗಳೂರು 1, ದಾವಣಗೆರೆ 1, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ರಾಮನಗರದಲ್ಲಿ ತಲಾ 1 ಪ್ರಕರಣ ದಾಖಲಾಗಿದೆ.
ಬೆಂಗಳೂರಲ್ಲಿ ದಿಢೀರ್ ಏರುಗತಿಗೆ ಬಂದಿದೆ ಕೋವಿಡ್
ಕೋವಿಡ್ ಸೋಂಕಿನಿಂದ ಆಸ್ಪತ್ರೆ ಸೇರುವವರ ಸಂಖ್ಯೆ ಹೆಚ್ಚಳವಾಗಿಲ್ಲ. ಕಳೆದ ಕೆಲವು ದಿನಗಳಿಂದ ಕೋವಿಡ್ ಸೋಂಕಿತರ ಸಾವು ಸಹ ಶೂನ್ಯವಾಗಿದೆ. ರಾಜ್ಯ ಬೆಂಗಳೂರಿನಲ್ಲಿ ಕಣ್ಗಾವಲು ವ್ಯವಸ್ಥೆಯನ್ನು ಮುಂದುವರೆಸಿದೆ. ನಗರದಲ್ಲಿ ಯಾವುದೇ ಹೊಸ ತಳಿ ಪತ್ತೆಯಾಗಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.