1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಕೆಆರ್ ಪುರ ಠಾಣೆ ಇನ್ಸ್‌ಪೆಕ್ಟರ್‌ ಮತ್ತು PSI ಲೋಕಾಯುಕ್ತ ಬಲೆಗೆ

1 ಲಕ್ಷ ರೂ. ಲಂಚ ಸ್ವೀಕರಿಸುತ್ತಿದ್ದಾಗ ಕೆಆರ್ ಪುರ ಠಾಣೆ ಇನ್ಸ್‌ಪೆಕ್ಟರ್‌ ಮತ್ತು PSI ಲೋಕಾಯುಕ್ತ ಬಲೆಗೆ

ಬೆಂಗಳೂರು: ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದಾಗ ಬೆಂಗಳೂರಿನ ಕೆಆರ್ ಪುರಂ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ಮತ್ತು ಪಿಎಸ್ಐ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ಕೆಆರ್ ಪುರಂ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್‌ ವಜ್ರಮುನಿ ಮತ್ತು ಪಿಎಸ್ಐ ರಮ್ಯಾ ಲೋಕಾಯುಕ್ತಕ್ಕೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಾರೆ. ಪೊಲೀಸರು ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ವಶಕ್ಕೆ ಪಡೆದಿದ್ದಾರೆ.
ಇನ್ಸ್ ಪೆಕ್ಟರ್ ವಜ್ರಮುನಿ, ಪಿಎಸ್ಐ ರಮ್ಯಾ ವಂಚನೆ ಪ್ರಕರಣದಲ್ಲಿ ವಶಕ್ಕೆ ಪಡೆದಿದ್ದ ಆರೋಪಿಯ ಬಿಡುಗಡೆಗಾಗಿ 5 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಅದರಂತೆ ಮುಂಗಡವಾಗಿ 50,000 ರೂಪಾಯಿ ಲಂಚ ಪಡೆದುಕೊಂಡಿದ್ದರು. ಇಂದು ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು