ಉಚಿತ ಮನೆ ಯೋಜನೆಯಡಿ ₹1 ಲಕ್ಷ ಸಹಾಯಧನ! ಈ ಸುಲಭ ವಿಧಾನದಲ್ಲಿ ಅರ್ಜಿ ಸಲ್ಲಿಸಿ

ಉಚಿತ ಮನೆ ಯೋಜನೆಯಡಿ ₹1 ಲಕ್ಷ ಸಹಾಯಧನ! ಈ ಸುಲಭ ವಿಧಾನದಲ್ಲಿ ಅರ್ಜಿ ಸಲ್ಲಿಸಿ


ಈ ಯೋಜನೆಯಡಿ ಎಷ್ಟು ಸಹಾಯಧನ ಪಡೆಯಬಹುದು?
ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿಯಲ್ಲಿ ಸರ್ಕಾರದಿಂದ ಸಬ್ಸಿಡಿ ಮೊತ್ತವನ್ನು ನೇರವಾಗಿ ಅರ್ಜಿ ಸಲ್ಲಿಸಿರುವ ಫಲಾನುಭವಿಯ ಬ್ಯಾಂಕ್ ಅಕೌಂಟ್ ಗೆ ವರ್ಗಾವಣೆ ಮಾಡಲಾಗುವುದು. ಈ ಯೋಜನೆಯು ನಗರ & ಗ್ರಾಮೀಣ ಎಂಬ 2 ವಿಭಾಗವನ್ನು ಹೊಂದಿದ್ದು. ಈ ಯೋಜನೆಯಡಿಯಲ್ಲಿ ಕೊಳೆಗೇರಿಗಳಲ್ಲಿ ಮನೆಗಳನ್ನು ನಿರ್ಮಿಸಲು ಕೇಂದ್ರ ಸರ್ಕಾರವು ಪ್ರತಿ ಮನೆಗೆ ರೂ.1 ಲಕ್ಷ ಸಹಾಯಧನ ನೀಡುತ್ತದೆ.

ಇದಲ್ಲದೇ ಗೃಹ ಸಾಲವನ್ನೂ(Home loan) ಸಹ ಪಡೆದುಕೊಳ್ಳಬಹುದಾಗಿದೆ. ಇದರ ಮೇಲೆ 6.5% ವರೆಗೆ ಬಡ್ಡಿ ಸಹಾಯಧನವನ್ನು ಒದಗಿಸಲಾಗುವುದು. ಸಾಲವನ್ನು 20 ವರ್ಷದಲ್ಲಿ ಮರುಪಾವತಿ ಮಾಡಿಕೊಳ್ಳಬಹುದಾಗಿದೆ.
ಈ ಯೋಜನೆಯ ಅರ್ಜಿ ಸ್ಥಿತಿ ಚೆಕ್ ಮಾಡುವ ವಿಧಾನ:
ನೀವೇನಾದರು ಈ ಯೋಜನೆಯಡಿ ಸೌಲಭ್ಯವನ್ನು ಪಡೆಯಲು ಅರ್ಜಿ ಸಲ್ಲಿಸಿದ್ದರೆ ನಿಮ್ಮ ಅರ್ಜಿಯ ಈ ಲಿಂಕ್‌ ಕ್ಲಿಕ್‌ ಮಾಡಿ PMAY Status check ಸ್ಥಿತಿಯನ್ನು ಚೆಕ್ ಮಾಡಿಕೊಳ್ಳಬಹುದು. ತರೆ ವಿವರ ತೋರಿಸಿದರೆ ಈ ಯೋಜನೆಯಡಿ ನೀವು ಸೌಲಭ್ಯ ಪಡೆಯಲು ಅರ್ಹರು ಎಂದು.
PMAY(U) ಮೊಬೈಲ್ ಅಪ್ಲಿಕೇಶನ್ ಮೂಲಕ ಅರ್ಜಿ ಸಲ್ಲಿಸಬಹುದು?
PMAY ಯೋಜನೆಯಡಿ ಪ್ರಯೋಜನ ಪಡೆಯಲು ಆಸಕ್ತಿಯಿರುವ ಅರ್ಹ ನಾಗರಿಕರು ಗೂಗಲ್ ಪ್ಲೈ ಸ್ಟೋರ್ ನಲ್ಲಿ PMAY(U) ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿಕೊಂಡು ಈ ಮೊಬೈಲ್ ಅಪ್ಲಿಕೇಶನ್ ಬಳಕೆ ಮಾಡಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.
PMAY(U) ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಲಿಂಕ್: Download Now
ಮೊಬೈಲ್ ನಲ್ಲಿ ಆಗದಿದ್ದರೆ ನಿಮ್ಮ ಹತ್ತಿರದ ಗ್ರಾಮ/ಪಟ್ಟಣ ಪಂಚಾಯತಿ ಸೇವಾ ಕೇಂದ್ರಗಳಿಗೆ ನೇರವಾಗಿ ಭೇಟಿ ಮಾಡಿ ಅಗತ್ಯ ದಾಖಲೆಗಳನ್ನು ಒದಗಿಸಿ ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.
ಈ ಯೋಜನೆಯಡಿ ಅರ್ಜಿ ಸಲ್ಲಿಸಲು ಯಾರೆಲ್ಲಾ ಅರ್ಹರು?

ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಅರ್ಜಿ ಸಲ್ಲಿಸಲು ಫಲಾನುಭವಿಗಳು ಈಗಾಗಲೇ ಸ್ವಂತ ಮನೆಯನ್ನು ಹೊಂದಿರಬಾರದು. ಈ ಯೋಜನೆಯಲ್ಲಿ ಮಹಿಳೆಯರಿಗೆ ಹೆಚ್ಚು ಆದ್ಯತೆ ನೀಡಲಾಗುತ್ತದೆ. ಅರ್ಜಿದಾರರು ಭಾರತೀಯರಾಗಿರಬೇಕು. ಅಲ್ಲದೆ ಭಾರತ ಸರ್ಕಾರ /ರಾಜ್ಯ ಸರ್ಕಾರದ ಯಾವುದೇ ವಸತಿ ಯೋಜನೆಯ ಪ್ರಯೋಜನವನ್ನು ಪಡೆದುಕೊಂಡಿರಬಾರದು.

ಇಡಬ್ಲ್ಯೂಎಸ್ ಅಡಿಯಲ್ಲಿ ಫಲಾನುಭವಿಯ ವಾರ್ಷಿಕ ಆದಾಯ ರೂ.6 ಲಕ್ಷ ಮೀರಿರಬಾರದು. ಅದೇ LIG ಅಡಿಯಲ್ಲಿ ಫಲಾನುಭವಿ ವಾರ್ಷಿಕ ಆದಾಯ ರೂ.6 ಲಕ್ಷಕ್ಕಿಂತ ಹೆಚ್ಚು & ರೂ.12 ಲಕ್ಷಕ್ಕಿಂತ ಕಡಿಮೆ ಇರಬೇಕಾಗುತ್ತದೆ. MIG-I ಫಲಾನುಭವಿಯ ವಾರ್ಷಿಕ ಆದಾಯವು ರೂ.12 ಲಕ್ಷ / ರೂ.18 ಲಕ್ಷಕ್ಕಿಂತ ಕಡಿಮೆ ಇರಬೇಕು. MIG-II ಗೆ ಫಲಾನುಭವಿಯ ವಾರ್ಷಿಕ ಆದಾಯ ರೂ. 18 ಲಕ್ಷ ಮೀರಿರಬಾರದು.
ಅರ್ಜಿ ಸಲ್ಲಿಸಲು ಅಗತ್ಯ ದಾಖಲಾತಿಗಳು:
ಅರ್ಜಿದಾರರ ಆಧಾರ್ ಕಾರ್ಡ್. (Aadhar card)
ವಿಳಾಸ ದೃಡೀಕರಣ.
ಆದಾಯ ಪ್ರಮಾಣಪತ್ರ.
ವಯಸ್ಸಿನ ಪ್ರಮಾಣಪತ್ರ.
ಅರ್ಜಿದಾರರ ಮೊಬೈಲ್ ಸಂಖ್ಯೆ. (mobile number)
ಬ್ಯಾಂಕ್ ಪಾಸ್ ಪುಸ್ತಕ ಪ್ರತಿ.(bank pass book)
ಪಾಸ್ಪೋರ್ಟ್ ಅಳತೆಯ ಭಾವಚಿತ್ರ.(Photo)

ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಅಧಿಕೃತ ವೆಬ್ಸೈಟ್: Click here
 
 



ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು