ಕಾರ್ಮಿಕ ಮಂಡಳಿಯಿಂದ ₹10,000 ವಿದ್ಯಾರ್ಥಿವೇತನ.!

ಕಾರ್ಮಿಕ ಮಂಡಳಿಯಿಂದ ₹10,000 ವಿದ್ಯಾರ್ಥಿವೇತನ.!

 2023-24 ನೇ ಸಾಲಿನ ಅರ್ಹ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಧನ ಸಹಾಯವನ್ನು ಪಡೆಯಲು ಎಲ್ಲಾ ಅರ್ಹ ಫಲಾನುಭವಿಗಳು ರಾಜ್ಯ ವಿದ್ಯಾರ್ಥಿ ವೇತನ ತಂತ್ರಾಂಶ (SSP)ದ ಮೂಲಕ ಅರ್ಜಿಯನ್ನು 31-05-2024 ರೊಳಗೆ ಸಲ್ಲಿಸತಕ್ಕದ್ದು ಎಂಬುದನ್ನು ಮಂಡಳಿಯಿಂದ ಪ್ರಕಟಣೆ ಹೊರಡಿಸಿದೆ.

2023-24 ನೇ ಸಾಲಿಗಾಗಿ ಈಗಾಗಲೇ SSP ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿರುವ ಫಲಾನುಭವಿಗಳು ಪುನಃ ಅರ್ಜಿಯನ್ನು ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಎಂದು ಕಾರ್ಮಿಕ ಮಂಡಳಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
2023-24 ನೇ ಸಾಲಿನಲ್ಲಿ ಅರ್ಹ ಕಟ್ಟಡ & ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಶೈಕ್ಷಣಿಕ ಧನ ಸಹಾಯವನ್ನು SSP ತಂತ್ರಾಂಶದ ಮೂಲಕ ನೀಡಲು ಅನುಕೂಲವಾಗುವಂತೆ ಮಂಡಳಿಯಲ್ಲಿ ನೋಂದಣಿಯಾಗಿರುವ ಎಲ್ಲಾ ಕಾರ್ಮಿಕರು https://kbocwwb.karnataka.gov.in ಲಿಂಕ್ ಅನ್ನು ಉಪಯೋಗಿಸಿಕೊಂಡು ಮಂಡಳಿಯ ತಂತ್ರಾಂಶದಲ್ಲಿ & ಉಲ್ಲೇಖ ಸಂಖ್ಯೆಯನ್ನು ನಮೂದಿಸಿ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡುವುದು ಕಡ್ಡಾಯ
ಆಧಾರ್ ಲಿಂಕ್ ಮಾಡಲು ಸೂಚನೆ:
ಮಂಡಳಿಯಿಂದ ಶೈಕ್ಷಣಿಕ ಧನ ಸಹಾಯವನ್ನು ಪಡೆಯಲು ಇದು ಆತ್ಮವಶ್ಯಕವಾದ್ದರಿಂದ ಈಗಾಗಲೇ ಆಧಾ‌ರ್ ಸಂಖ್ಯೆಯನ್ನು ಲಿಂಕ್ ಮಾಡದೇ ಇರುವ ಎಲ್ಲಾ ಕಾರ್ಮಿಕರು ಕಡ್ಡಾಯವಾಗಿ ದಿನಾಂಕ: 30-06-2024 ಒಳಗಾಗಿ ಆಧಾರ್ ಸಂಖ್ಯೆಯನ್ನು ಲಿಂಕ್ ಮಾಡತಕ್ಕದ್ದು.

ಇದಲ್ಲ ನೋಂದಾಯಿತ ಕಾರ್ಮಿಕರು ತಮ್ಮ ಆಧಾರ್ ಸಂಖ್ಯೆಯನ್ನು ಬ್ಯಾಂಕ್ ಖಾತೆಯೊಂದಿಗೆ ಜೋಡಣೆ ಮಾಡಿ ಮ್ಯಾಪಿಂಗ್ ಮಾಡಬೇಕಾಗುತ್ತದೆ. ಆಧಾ‌ರ್ ಸೀಡ್ ಮತ್ತು NPCI ಮಾಡಿಸದೇ ಇರುವ ಕಾರ್ಮಿಕರಿಗೆ ಶೈಕ್ಷಣಿಕ ಧನ ಸಹಾಯ ನೀಡಲು ಸಾಧ್ಯವಾಗದಿರುವುದರಿಂದ ಕಡ್ಡಾಯವಾಗಿ ಸೀಡಿಂಗ್ ಮಾಡಿಸಬೇಕಾಗುತ್ತದೆ.
ಅರ್ಜಿ ಸಲ್ಲಿಸಲು ವಿಧಾನ:
ವಿದ್ಯಾರ್ಥಿಗಳು ಈ ಲಿಂಕ್ Apply Now ಮೇಲೆ ಕ್ಲಿಕ್ ಮಾಡಿಕೊಂಡು ಅಧಿಕೃತ SSP Portal ಅನ್ನು ಭೇಟಿ ನೀಡಿ ಅಗತ್ಯ ಮಾಹಿತಿಯನ್ನು ಒದಗಿಸಿ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸಲು ಕೊನೆ ದಿನ! 31 ಮೇ 2024
ಮಂಡಳಿಯಿಂದ ಎಷ್ಟು ವಿದ್ಯಾರ್ಥಿವೇತನ ನೀಡಲಾಗುತ್ತದೆ?

1) ಪ್ರೌಢಶಾಲೆಗಳಿಗೆ (8 ರಿಂದ 10ನೇ ತರಗತಿವರೆಗೆ)- ರೂ.3,000/- 
2) PUC/ITI/Dip./TCH ಕೋರ್ಸ್‌ಗೆ- ₹ 4,000/- 
3) ಪದವಿ ಕೋರ್ಸ್‌ಗಳಿಗೆ-₹5,000/- 
4) ಸ್ನಾತಕೋತ್ತರ ಕೋರ್ಸ್‌ಗಳಿಗೆ- ₹6,000/- 
5) ಎಂಜಿನಿಯರಿಂಗ್/ವೈದ್ಯಕೀಯ ಕೋರ್ಸ್‌ಗಳು- ₹10,000/- ನೀಡಲಾಗುತ್ತದೆ (ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 50% & SC/ST ವರ್ಗದ ಅಭ್ಯರ್ಥಿಗಳಿಗೆ 45% ಅಂಕಗಳನ್ನು ನಿಗದಿ ಮಾಡಲಾಗಿದೆ).







ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು