9144 ರೈಲ್ವೇ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ

9144 ರೈಲ್ವೇ  ಹುದ್ದೆಗಳಿಗೆ ಅರ್ಜಿ  ಸಲ್ಲಿಸಿ

 ಸರ್ಕಾರಿ ಉದ್ಯೋಗಾಕಾಂಕ್ಷಿಗಳಿಗೆ ಸಿಹಿ ಸುದ್ದಿ. ರೈಲ್ವೇ ನೇಮಕಾತಿ ಮಂಡಳಿ (ಆರ್‌ಆರ್‌ಬಿ) ತಂತ್ರಜ್ಞರ ಹುದ್ದೆಗಳ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಈ ಬಾರಿಯ ಒಂದೇ ಹಂತದಲ್ಲಿ ಪರೀಕ್ಷೆ ನಡೆಯಲಿದ್ದು. ಮಾರ್ಚ್ 8, 2024 ರಂದು ರೈಲ್ವೆ ನೇಮಕಾತಿ ಮಂಡಳಿಗಳ ಅಧಿಕೃತ ವೆಬ್‌ಸೈಟ್‌ನಲ್ಲಿ  ಅಧಿಸೂಚನೆಯನ್ನು ಬಿಡುಗಡೆ ಮಾಡಲಾಗಿದೆ. 
ಅರ್ಜಿ ಪ್ರಕ್ರಿಯೆ: 
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳಿಗೆ ಮಾರ್ಚ್ 09 ರಿಂದ ಆನ್‌ಲೈನ್ ಅರ್ಜಿ ಪ್ರಕ್ರಿಯೆ ಪ್ರಾರಂಭವಾಗಲಿದ್ದು, ಅರ್ಹ & ಆಸಕ್ತ ಅಭ್ಯರ್ಥಿಗಳು 08ನೇ ಏಪ್ರಿಲ್ 2024ರವರೆಗೂ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ. 

2024 ರ RRB ತಂತ್ರಜ್ಞರ ಅರ್ಜಿ ನಮೂನೆಯು ಪ್ರಾದೇಶಿಕ ರೈಲ್ವೆ ನೇಮಕಾತಿ ಮಂಡಳಿಗಳ (RRBs) ಅಧಿಕೃತ ವೆಬ್‌ಸೈಟ್‌ನಲ್ಲಿ ಮಾರ್ಚ್ 9, 2024 ರಿಂದು ಏಪ್ರಿಲ್ 8, 2024 ರವರೆಗೆ ಆನ್‌ಲೈನ್‌ನಲ್ಲಿ ಲಭ್ಯವಿರುತ್ತದೆ. ಅರ್ಜಿ ಸಲ್ಲಿಸಲು ಈ ಲಿಂಕ್ rrbapply.gov.in ಭೇಟಿ ನೀಡಿ.

9 ಸಾವಿರಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕಾತಿ: 
ಈ ನೇಮಕಾತಿ ಅಡಿಯಲ್ಲಿ ಒಟ್ಟು 9144 ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು. ಈ ಪೈಕಿ 1092 ಹುದ್ದೆಗಳು ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ ಮತ್ತು 1092 ಹುದ್ದೆಗಳು ಟೆಕ್ನಿಷಿಯನ್ ಗ್ರೇಡ್-1 ಸಿಗ್ನಲ್ ಪೋಸ್ಟ್‌ನ್ನು ಒಳಗೊಂಡಿದೆ.  

ವೇತನ: ರೂ.19,900-20,200

ವಿದ್ಯಾರ್ಹತೆ
ಗ್ರೇಡ್ I ಸಿಗ್ನಲ್ ತಂತ್ರಜ್ಞ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಬ್ಯಾಚುಲರ್ ಆಫ್ ಸೈನ್ಸ್ / ಬಿ.ಎಸ್ಸಿ. ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಸಂಸ್ಥೆಯಿಂದ ಭೌತಶಾಸ್ತ್ರ, ಎಲೆಕ್ಟ್ರಾನಿಕ್ಸ್, ಕಂಪ್ಯೂಟರ್ ಸೈನ್ಸ್, ಮಾಹಿತಿ ತಂತ್ರಜ್ಞಾನ ಉಪಕರಣಗಳಲ್ಲಿ ಪದವಿ ಹೊಂದಿರಬೇಕಾಗುತ್ತದೆ. 

ಟೆಕ್ನಿಷಿಯನ್ ಗ್ರೇಡ್-III ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಯು ಮೆಟ್ರಿಕ್ಯುಲೇಷನ್/SSLC ಜೊತೆಗೆ ITI & ವಿಜ್ಞಾನದಲ್ಲಿ ಬ್ಯಾಚುಲರ್ ಡಿಗ್ರಿ ಹೊಂದಿರಬೇಕಾಗುತ್ತದೆ .


ವಯೋಮಿತಿ

ಟೆಕ್ನಿಷಿಯನ್ ಗ್ರೇಡ್-1 ಹುದ್ದೆಗಳಿಗೆ ವಯೋಮಿತಿ 18 ವರ್ಷಕ್ಕಿಂತ ಹೆಚ್ಚಿರಬೇಕು & 36 ವರ್ಷಗಳಿಗಿಂತ ಕಡಿಮೆ ಇರಬೇಕಾಗುತ್ತದೆ. ಆದರೆ ಟೆಕ್ನಿಷಿಯನ್ ಗ್ರೇಡ್-III ಹುದ್ದೆಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ 18 ರಿಂದ 33 ವರ್ಷಗಳ ವಯೋಮಿತಿಯನ್ನು ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ & ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ಓ‌ಬಿ‌ಸಿ ಅಭ್ಯರ್ಥಿಗಳಿಗೆ 3 ವರ್ಷಗಳ ವಯಸ್ಸಿನ ಸಡಿಲಿಕೆಯನ್ನು ನೀಡಲಾಗಿರುತ್ತದೆ.





ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು