ಎಸೆಸೆಲ್ಸಿ ಪರೀಕ್ಷೆಗೆ ಹಾಜರಾಗುವ ವಿದ್ಯಾರ್ಥಿಗಳಿಗಾಗಿ ‘ಸಹಾಯವಾಣಿ’

ಕರ್ನಾಟಕ: ಎಸೆಸೆಲ್ಸಿ ಪರೀಕ್ಷೆಯನ್ನು ಬರೆಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸಹಾಯವಾಣಿಯನ್ನು ತೆರಯಲಾಗಿದ್ದು, ಪರೀಕ್ಷೆಯ ವಿಚಾರವಾಗಿ ವಿದ್ಯಾರ್ಥಿಗಳು 080-23310075 ಮತ್ತು 080-23310076 ದೂರವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದಾಗಿದೆ.

ಈ ಸಹಾಯವಾಣಿಯು ಮಾ.14ರಿಂದ ಮಾ.22ರವರೆಗೆ ಪ್ರತಿ ದಿನ ಅಪರಾಹ್ನ 2.30 ರಿಂದ ಸಂಜೆ 6.30 ಗಂಟೆಯವರೆಗೆ ಹಾಗೂ ಮಾ.17ರಂದು ಬೆಳಿಗ್ಗೆ 11.00 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಾರ್ಯನಿರ್ವಹಿಸಲಿದೆ.

ಮಾ.25ರಿಂದ ಎ.6ರವರೆಗೆ ನಿಯಂತ್ರಣ ಕೊಠಡಿಯಾಗಿ ಬೆಳಿಗ್ಗೆ 10 ಗಂಟೆಯಿಂದ ಮದ್ಯಾಹ್ನ 2 ಗಂಟೆಯವರೆಗೆ ಪರೀಕ್ಷಾ ದಿನಗಳಂದು ಮಾತ್ರ ಕಾರ್ಯನಿರ್ವಹಿಸಲಾಗುತ್ತದೆ.

ಪೋಷಕರು, ವಿದ್ಯಾರ್ಥಿಗಳು ದೂರವಾಣಿ ಸಂಖ್ಯೆಗಳಿಗೆ ಕರೆಮಾಡಿ ತಮ್ಮ ಸಮಸ್ಯೆಗಳಿಗೆ, ಸಂದೇಹಗಳಿಗೆ ಪರಿಹಾರ ಪಡೆದುಕೊಳ್ಳಬಹುದು ಪ್ರಕಟಣೆ ತಿಳಿಸಿದೆ.

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು