ಕೃಷಿ ಭಾಗ್ಯ ಯೋಜನೆಯಡಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ.!

ಕೃಷಿ ಭಾಗ್ಯ ಯೋಜನೆಯಡಿ ಸಬ್ಸಿಡಿ ಪಡೆಯಲು ಅರ್ಜಿ ಆಹ್ವಾನ.!


1 ಕೃಷಿ ಭಾಗ್ಯ ಸಬ್ಸಿಡಿ ಯೋಜನೆ 2024
2 ದಾಖಲೆಗಳು:
3 ಅರ್ಜಿ ಸಲ್ಲಿಸುವುದು ಹೇಗೆ?
4 ಇತರೆ ವಿಷಯಗಳು
4.1 Related
ಕೃಷಿ ಭಾಗ್ಯ ಸಬ್ಸಿಡಿ ಯೋಜನೆ 2024
ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಕೃಷಿ ಹೊಂಡ ನಿರ್ಮಾಣ ಮಾಡುವುದು, ಕ್ಷೇತ್ರ ಬದು ನಿರ್ಮಾಣ ಮಾಡುವುದು, ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ ನಿರ್ಮಾಣ, ಕೃಷಿ ಹೊಂಡದಿಂದ ನೀರು ಎತ್ತಲು ಪಂಪ್ ಸೆಟ್‌ಗಳನ್ನು ಖರೀದಿಸಲು ಅವಕಾಶ, ನೀರನ್ನು ಬೆಳೆಗೆ ಹಾಯಿಸಲು ತುಂತುರು ನೀಡು, ಹನಿ ನೀರಾವರಿ ಘಟಕ ಅನುಷ್ಠಾನಕ್ಕೆ ಸಬ್ಸಿಡಿ ನೀಡಲಾಗುವುದು.

ಕೃಷಿ ಭಾಗ್ಯ ಪ್ಯಾಕೇಜ್‌ ಈ ಕೆಳಕಂಡ ಘಟಕಗಳನ್ನು ಒಳಗೊಂಡಿದ್ದು, ಯೋಜನೆಯ ಸಮಗ್ರ ಸದುಪಯೋಗ ಪಡೆಯಲು ರೈತ ಬಾಂಧವರಲ್ಲಿ ವಿನಂತಿ ಎಂದು ಸರ್ಕಾರದಿಂದ ತಿಳಿಸಿದೆ.

ಕ್ಷೇತ್ರ ಬದು ನಿರ್ಮಾಣ.
ಕೃಷಿ ಹೊಂಡ ನಿರ್ಮಾಣ.
ಕೃಷಿ ಹೊಂಡದ ಸುತ್ತಲೂ ತಂತಿ ಬೇಲಿ.
ಕೃಷಿ ಹೊಂಡದಿಂದ ನೀರು ಎತ್ತಲು ಪಂಪ್ ಸೆಟ್.
ನೀರನ್ನು ಬೆಳೆಗೆ ಹಾಯಿಸಲು ಸೂಕ್ಷ್ಮ (ತುಂತುರು/ಹನಿ) ನೀರಾವರಿ.
ದಾಖಲೆಗಳು:
ರೈತರ ಅರ್ಜಿ
ರೈತರ ಭಾವಚಿತ್ರ.
FID (FID ಇಲ್ಲವಾದಲ್ಲಿ ಆಧಾ‌ರ್ ಕಾರ್ಡ್, ಪಹಣಿ ಪ್ರತಿ, ಜಾತಿ ಪ್ರಮಾಣ ಪತ್ರ ಮತ್ತು ಬ್ಯಾಂಕ್ ಪಾಸ್ ಬುಕ್)
ಅರ್ಜಿ ಸಲ್ಲಿಸುವುದು ಹೇಗೆ?
ಅರ್ಹ ರೈತರು ತಮ್ಮ ಹೋಬಳಿಯ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ. ಸ್ವೀಕೃತವಾದ ಅರ್ಹ ಅರ್ಜಿಗಳ ಜೇಷ್ಠತೆಯನ್ವಯ ಮತ್ತು ಹೋಬಳಿಗೆ ನಿಗದಿಪಡಿಸಿದ ಗುರಿಗಳ ಅನ್ವಯ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲಾಗುತ್ತದೆ ಎಂದು ಕೃಷಿ ಇಲಾಖೆಯು ತಿಳಿಸಿದೆ...


ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು