PDO ಹುದ್ದೆಗಳ ನೇಮಕಾತಿ ಆರಂಭ.! ಡಿಗ್ರಿ ಪಾಸಾದ ಆಸಕ್ತರು ಅಪ್ಲೇ ಮಾಡಿ

ಕರ್ನಾಟಕ ಪಬ್ಲಿಕ್ ಸರ್ವೀಸ್‌ ಕಮಿಷನ್ ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್‌ ಇಲಾಖೆಯಡಿ ಖಾಲಿ ಇರುವ ಗ್ರೂಪ್‌ ಸಿ ವೃಂದದ ಪಂಚಾಯತ್ ಅಭಿವೃದ್ಧಿ ಅಧಿಕಾರಿ – ‌PDO ಹುದ್ದೆಗಳ ಭರ್ತಿಗೆ ಇದೀಗ ನೇಮಕ ಅಧಿಸೂಚನೆ ಬಿಡುಗಡೆ ಮಾಡಿದೆ. ಅರ್ಹ & ಆಸಕ್ತ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಆನ್‌ಲೈನ್‌ ಮೂಲಕ ಅರ್ಜಿ ಏಪ್ರಿಲ್ 15 ರಿಂದ ಸಲ್ಲಿಸಬಹುದು.
ನೇಮಕಾತಿ ಪ್ರಾಧಿಕಾರ : ಕರ್ನಾಟಕ ಲೋಕಸೇವಾ ಆಯೋಗ
ಉದ್ಯೋಗ ಇಲಾಖೆ : ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್‌ ಇಲಾಖೆ
ಹುದ್ದೆ ಹೆಸರು : ಪಂಚಾಯಿತಿ ಅಭಿವೃದ್ಧಿ ಅಧಿಕಾರಿ
ಒಟ್ಟು ಹುದ್ದೆಗಳ ಸಂಖ್ಯೆ : 247 (150RPC+ 97HK)

ಕರ್ನಾಟಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆ ವೇತನ ಶ್ರೇಣಿ ರೂ.37,900-70,850.
ಕರ್ನಾಟಕ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಅರ್ಜಿ ಸಲ್ಲಿಸಲು ವಯಸ್ಸಿನ ಅರ್ಹತೆ
ಕನಿಷ್ಠ 18 ವರ್ಷ.
ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ಗರಿಷ್ಠ 35 ವಯೋಮಿತಿ.
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ 38 ವಯೋಮಿತಿ.
SE, ST, ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ.
ಅರ್ಜಿಗೆ ಸಲ್ಲಿಸಲು ದಿನಾಂಕ
ಆನ್‌ಲೈನ್ ಅರ್ಜಿಗೆ ಪ್ರಾರಂಭಿಕ ದಿನಾಂಕ : 15-04-2024
ಆನ್‌ಲೈನ್ ಅರ್ಜಿಗೆ ಕೊನೆಯ ದಿನಾಂಕ : 15-05-2024
ಹುದ್ದೆಗೆ ಅರ್ಜಿ ಶುಲ್ಕ ವಿವರ
ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ -₹600.
– ಇತರೆ ಹಿಂದುಳಿದ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ – ₹300.
– ಮಾಜಿ ಸೈನಿಕ ಅಭ್ಯರ್ಥಿಗಳಿಗೆ -₹50
– ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1 ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ನೀಡಲಾಗುತ್ತದೆ.

ಆಯ್ಕೆ ವಿಧಾನ : ಸ್ಪರ್ಧಾತ್ಮಕ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ.
ಕರ್ನಾಟಕ PDO ಹುದ್ದೆಗೆ ಸ್ಪರ್ಧಾತ್ಮಕ ಪರೀಕ್ಷೆ ಹೇಗಿರುತ್ತದೆ?
ಕರ್ನಾಟಕ PDO ಹುದ್ದೆಗೆ ಒಟ್ಟು 400 ಅಂಕಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಈ ಕೆಳಗಿನ ಮಾದರಿಗಳಲ್ಲಿ ನಡೆಸಲಾಗುತ್ತದೆ.
ಪತ್ರಿಕೆ-1
ಸಾಮಾನ್ಯ ಕನ್ನಡ, ಸಾಮಾನ್ಯ ಜ್ಞಾನ, ಸಾಮಾನ್ಯ ಇಂಗ್ಲಿಷ್ ಕುರಿತ 100 ಅಂಕಗಳು ಇರಲಿದ್ದು, ಒಟ್ಟು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ. ಒಟ್ಟು ಪರೀಕ್ಷೆ ಅವಧಿ 2 ಗಂಟೆ. ವಸ್ತುನಿಷ್ಠ ಬಹು ಆಯ್ಕೆ ಪ್ರಶ್ನೆ ಇರಲಿದೆ.
ಪತ್ರಿಕೆ-2
ಗ್ರಾಮೀಣಾಭಿವೃದ್ಧಿ & ಪಂಚಾಯತ್ ರಾಜ್‌ ವಿಷಯಕ್ಕೆ ಸಂಬಂಧಿಸಿದ 100 ಪ್ರಶ್ನೆಗಳು ಇರಲಿದೆ. ಈ ಪತ್ರಿಕೆಯು 200 ಅಂಕಗಳಿಗೆ ಪರೀಕ್ಷೆ ಇರುತ್ತದೆ. 2 ಗಂಟೆಗಳ ಪರೀಕ್ಷೆ ಇರುತ್ತದೆ. ಈ ಪತ್ರಿಕೆಯು ವಸ್ತುನಿಷ್ಠ ಬಹು ಆಯ್ಕೆಯ ಪತ್ರಿಕೆಯಾಗಿರುತ್ತದೆ.


ಸ್ಪರ್ಧಾತ್ಮಕ ಪರೀಕ್ಷೆಯನ್ನು ಎಲ್ಲಾ ಜಿಲ್ಲಾ ಅಥವಾ ತಾಲ್ಕೂಕು ಕೇಂದ್ರಗಳಲ್ಲಿ ನಡೆಯಲಿದೆ.
ಪಿಂಚಣಿ ಸೌಲಭ್ಯ : ಸರ್ಕಾರದ ಆದೇಶ ಸಂಖ್ಯೆ- FD (SPL) 04 PET 2005, ದಿನಾಂಕ 31-03-2006 ರಂತೆ ನೀಡಲಾಗುತ್ತದೆ.
ವಿದ್ಯಾರ್ಹತೆ: ಯಾವುದೇ ಪದವಿ

ವೆಬ್‌ಸೈಟ್‌ ವಿಳಾಸ:https://www.kpsc.kar.nic.in/






ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು