ಮಾರ್ಚ್ 31ರ ಒಳಗೆ ಕೃಷಿ ಸಾಲದ ಅಸಲು ಪಾವತಿ ಮಾಡಿದ್ರೆ ಬಡ್ಡಿ ಮನ್ನಾ! ರಾಜ್ಯ ಸರ್ಕಾರದ ಘೋಷಣೆ

ಮಾರ್ಚ್ 31ರ ಒಳಗೆ ಅಸಲು ಪಾವತಿ ಮಾಡಿದ್ರೆ ಬಡ್ಡಿ ಮನ್ನಾ:
ಪ್ರಾಥಮಿಕ ಸಹಕಾರಿ ಕೃಷಿ ಬ್ಯಾಂಕ್ ಹಾಗೂ ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ಗಳಲ್ಲಿ ರೈತರು ಕೃಷಿ ಸಾಲ ತೆಗೆದುಕೊಂಡಿದ್ದರೆ ಅವರ ಬಡ್ಡಿಯನ್ನು ಮನ್ನಾ ಮಾಡುವುದಾಗಿ ರಾಜ್ಯ ಸರ್ಕಾರ ತಿಳಿಸಿತು. ಆದರೆ ಇದರ ಪ್ರಯೋಜನ ಪಡೆದುಕೊಳ್ಳಬೇಕು ಎಂದಾದರೆ ಮಾರ್ಚ್ 31 2024ರ ಒಳಗೆ ಸಾಲದ ಅಸಲು ಪಾವತಿ ಮಾಡಬೇಕು. ಈ ರೀತಿಯ ಅಸಲು ಪಾವತಿ ಮಾಡಿದರೆ ಬಡ್ಡಿ ಮನ್ನಾ ಆಗುತ್ತದೆ.

ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು, ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ ಗಳು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕುಗಳು, ಮೊದಲಾದ ಬ್ಯಾಂಕುಗಳಲ್ಲಿ ರೈತರು ಸಾಲ ಪಡೆದುಕೊಂಡಿದ್ದರೆ, ಮಾರ್ಚ್ 31 2024ರ ಒಳಗೆ ಅಲ್ಪಾವಧಿಯ ಅಥವಾ ದೀರ್ಘಾವಧಿಯ ಸಾಲದ ಅಸಲು ಮರುಪಾವತಿ ಮಾಡಲು ಅವಕಾಶ ನೀಡಲಾಗಿದ್ದು, ಈ ಅವಧಿಯೊಳಗೆ ಅಸಲು ಮರುಪಾವತಿ ಆದರೆ ಅಂಥವರ ಬಡ್ಡಿ ಮನ್ನಾ ಮಾಡಲಾಗುವುದು ಎಂದು ಸರ್ಕಾರ ಮತ್ತೆ ಆದೇಶ ಹೊರಡಿಸಿದೆ

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು