ನಾಳೆಯಿಂದ ಒಂದು ವಾರ ರಾಜ್ಯದಲ್ಲಿ ಭಾರಿ ಮಳೆ!! ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಮುನ್ಸೂಚನೆ

ಕಳೆದ ಹಲವು ದಿನಗಳಿಂದ ರಾಜ್ಯದ ಹಲವಾರು ಕಡೆಯಲ್ಲಿ ಮಳೆಯಾಗುತ್ತಿದ್ದು, ಏಪ್ರಿಲ್ 18 ರಿಂದ ಕರ್ನಾಟಕದಾದ್ಯಂತ ಗುಡುಗು ಸಹಿತ ಭಾರಿ ಮಳೆಯಾಗಲಿದೆ ಎಂದು ಮುನ್ಸೂಚನೆಯನ್ನು ನೀಡಿದೆ.
ಏ.18ರ ಬಳಿಕ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೀದರ್, ಬಾಗಲಕೋಟೆ, ಗದಗ, ಕೊಪ್ಪಳ, ರಾಯಚೂರು, ಕೋಲಾರ, ಕಲಬುರಗಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ವಿಜಯಪುರ, ಚಾಮರಾಜನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಕೊಡಗು, ಚಿಕ್ಕಮಗಳೂರು, ಹಾಸನ, ಚಿತ್ರದುರ್ಗ, ಕೋಲಾರ, ಮೈಸೂರು, ಶಿವಮೊಗ್ಗ, ವಿಜಯನಗರ, ಮಂಡ್ಯ, ರಾಮನಗರ, ತುಮಕೂರಿನಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮಾಹಿತಿಯನ್ನು ತಿಳಿಸಿದೆ.
ಕಳೆದ 2 ದಿನಗಳಿಂದ ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ, ಶೃಂಗೇರಿ, ತರೀಕೆರೆ, ಬಾಳೆಹೊನ್ನೂರು ಸೇರಿದಂತೆ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಹಾಗೂ ಆಗುಂಬೆಯಲ್ಲಿ ಸಹ ಸಾಧಾರಣ ಮಳೆಯಾಗಿದೆ.

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು