ಬಿವಿಬಿ ಕಾಲೇಜಿನಲ್ಲಿ ಎಂಸಿಎ ಓದುತ್ತಿದ್ದ ನೇಹಾ ಹಿರೇಮಠ ಅವರನ್ನು ಬೆಳಗಾವಿ ಜಿಲ್ಲೆಯ ಸವದತ್ತಿ ನಿವಾಸಿ ಹಾಗೂ ಅದೇ ಕಾಲೇಜಿನ ಬಿಸಿಎ ವಿದ್ಯಾರ್ಥಿ ಫಯಾಜ್ ಕೊಂಡಿಕೊಪ್ಪ ಎಂಬುವರು ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ. ಆತನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ನೇಹಾ ಅವರ ತಂದೆ ನಿರಂಜನ ಹಿರೇಮಠ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಆಗಿದ್ದಾರೆ.
ನೇಹಾ ಹತ್ಯೆ ಖಂಡಿಸಿ ಹಿಂದೂ ಪರ ಸಂಘಟನೆಗಳಿಂದ ಹುಬ್ಬಳ್ಳಿ ಬಂದ್
ಹುಬ್ಬಳ್ಳಿಯ ಬಿವಿಬಿ ಕಾಲೇಜು ಆವರಣದಲ್ಲಿ ಕಾಂಗ್ರೆಸ್ ಕಾರ್ಪೊರೇಟರ್ ಪುತ್ರಿಯ ಹತ್ಯೆಯನ್ನು ಖಂಡಿಸಿ ಹಿಂದೂ ಪರ ಸಂಘಟನೆಗಳು ಮತ್ತು ವಿದ್ಯಾರ್ಥಿ ಸಂಘಟನೆಗಳು ಶುಕ್ರವಾರ ಹುಬ್ಬಳ್ಳಿ ಬಂದ್‌ಗೆ ಕರೆ ನೀಡಿದ್ದವು.
ಹಿಂದೂ ಪರ ಸಂಘಟನೆಗಳ ಪ್ರತಿಭಟನೆ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿ ಪೊಲೀಸ್ ಇಲಾಖೆ ಕಟ್ಟೆಚ್ಚರ ವಹಿಸಿದ್ದು, ನಗರದಾದ್ಯಂತ ಭದ್ರತೆಯನ್ನು ಹೆಚ್ಚಿಸಲಾಗಿದೆ.
ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಎಲ್ಲಾ ಕಾಲೇಜುಗಳಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ಬಂದ್ ಘೋಷಿಸಿದೆ.
ಹಿಂದೂ ಜಾಗರಣ ವೇದಿಕೆ, ಶ್ರೀರಾಮ ಸೇನೆ ಮತ್ತು ವಿಶ್ವ ಹಿಂದೂ ಪರಿಷತ್, ನೇಹಾ ಹತ್ಯೆ ಖಂಡಿಸಿ ಬೆಳಗಾವಿ ನಗರದಲ್ಲಿ ಪ್ರತಿಭಟನೆಗೆ ನಡೆಸಿದವು.
ಇದು ಲವ್ ಜಿಹಾದ್ ಪ್ರಕರಣವಲ್ಲ ! – ಗೃಹ ಸಚಿವ ಡಾ. ಜಿ. ಪರಮೇಶ್ವರ
ಹುಬ್ಬಳ್ಳಿಯಲ್ಲಿ ನಡೆದ ನೇಹಾ ಹತ್ಯೆ ಲವ್ ಜಿಹಾದ್ ಅಲ್ಲ. ಇದು ಕೇವಲ ಎರಡು ಧರ್ಮಗಳ ನಡುವೆ ನಡೆದ ಘಟನೆಯಾಗಿದೆ. ನೇಹಾ ಮೊದಲಿನಿಂದಲೂ ಫಯಾಜ್ ನನ್ನು ಪ್ರೀತಿಸುತ್ತಿದ್ದಳು. ಅವಳ ಮನೆಯವರು ಇದನ್ನು ಅರಿತಿದ್ದರು. ಮನೆಯವರು ಆಕೆಗೆ ವಿವರಿಸಿ ಇಲ್ಲಿಗೆ ನಿಲ್ಲಿಸುವಂತೆ ಹೇಳಿದರು. ಮನೆಯವರು ಹೇಳಿದ್ದನ್ನು ನೇಹಾ ಕೂಡ ಒಪ್ಪಿಕೊಂಡಳು; ಆದರೆ ಈ ವಿಚಾರವನ್ನು ಸಹಿಸದ ಯುವಕ ಆಕೆಯನ್ನು ಕೊಂದಿದ್ದಾನೆ. ಘಟನೆ ನಿಜವಾಗಿ ನಡೆದಿದ್ದು, ಆ ವೇಳೆ ನೇಹಾ ಅವರ ತಾಯಿ ಜೊತೆಗಿದ್ದರು. ಆಕೆಯ ಮೇಲೂ ದಾಳಿಯಾಯಿತು; ಆದರೆ ನೇಹಾ ತನ್ನ ತಾಯಿಯನ್ನು ರಕ್ಷಿಸಿದಳು. ಇದು ಲವ್ ಜಿಹಾದ್ ಪ್ರಕರಣವಲ್ಲ. “ನನ್ನನ್ನು ಬಿಟ್ಟು ಬೇರೊಬ್ಬರನ್ನು ಮದುವೆಯಾಗುತ್ತೀರಾ?” ಈ ಸಿಟ್ಟಿನಿಂದ ಆತ ಕೊಲೆ ಮಾಡಿದ. ಇಂತಹ ಘಟನೆಗಳು ಆಕಸ್ಮಿಕವಾಗಿ ಸಂಭವಿಸುತ್ತವೆ. ಚುನಾವಣೆಯ ಹಿನ್ನೆಲೆಯಲ್ಲಿ ಈ ವಿಷಯಕ್ಕೆ ರಾಜಕೀಯ ಬಣ್ಣ ನೀಡಲಾಗುತ್ತಿದೆ. ಇದು ಸರಿಯಲ್ಲ ಎಂದು ರಾಜ್ಯದ ಗೃಹ ಸಚಿವ ಜಿ. ಪರಮೇಶ್ವರ ಇವರು ಹೇಳಿದ್ದಾರೆ.
ಸಂಪಾದಕೀಯ ✍️
ದೇಶದಲ್ಲಿ ಮುಸ್ಲಿಮರು ಅಸುರಕ್ಷಿತರಾಗಿದ್ದಾರೆ ಎಂದು ಹೇಳುವ #Congress ಸರಕಾರದ ರಾಜ್ಯದಲ್ಲಿ ಹಿಂದೂ ಹೆಣ್ಣುಮಕ್ಕಳೇ ಅಸುರಕ್ಷಿತರಾಗಿದ್ದಾರೆ ಎಂಬುದನ್ನು ಗಮನಿಸಿ !