ಕಳೆದ 6 ತಿಂಗಳಲ್ಲಿ ಪೂಂಚ್‌ನಲ್ಲಿ ಮೂರನೇ ದಾಳಿ
ಶ್ರೀನಗರ (ಜೆ & ಕೆ) - ಮೇ 4 ರ ಸಂಜೆ ಕಾಶ್ಮೀರದ ಪೂಂಚ್ ಪ್ರದೇಶದಲ್ಲಿ ಜಿಹಾದಿ ಭಯೋತ್ಪಾದಕರು ನಡೆಸಿದ ದಾಳಿಯಲ್ಲಿ ಯೋಧ ಹುತಾತ್ಮರಾಗಿದ್ದಾರೆ ಮತ್ತು ಇತರ 4 ಸೈನಿಕರು ಗಾಯಗೊಂಡಿದ್ದಾರೆ. ಹುತಾತ್ಮ ಯೋಧನನ್ನು ಭಾರತೀಯ ವಾಯುಪಡೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಕಾರ್ಪೋರಲ್ ವಿಕ್ಕಿ ಪಹಾಡೆ ಎಂದು ಗುರುತಿಸಲಾಗಿದೆ.
ಪೂಂಚ್‌ನ ಸುರನ್‌ಕೋಟೆ ಪ್ರದೇಶದಲ್ಲಿ 2 ಭದ್ರತಾ ವಾಹನಗಳು ರಸ್ತೆಯಲ್ಲಿ ಸಾಗುತ್ತಿದ್ದಾಗ 4 ಉಗ್ರರು ಮನಬಂದಂತೆ ಗುಂಡಿನ ದಾಳಿ ನಡೆಸಿದ್ದಾರೆ. 2 ವಾಹನಗಳಲ್ಲಿ ಒಂದು ಭಾರತೀಯ ವಾಯುಸೇನೆಗೆ ಸೇರಿತ್ತು. ದಾಳಿ ಬಳಿಕ ಉಗ್ರರು ಅರಣ್ಯಕ್ಕೆ ಪರಾರಿಯಾಗಿದ್ದಾರೆ. ಸ್ಥಳೀಯ ಪೊಲೀಸರು ಮತ್ತು ರಕ್ಷಣಾ ಸಂಸ್ಥೆಗಳು ಉಗ್ರರಿಗಾಗಿ ಶೋಧ ನಡೆಸುತ್ತಿವೆ. ಪೂಂಚ್ ರಜೌರಿ-ಅನಂತನಾಗ್ ಲೋಕಸಭಾ ಕ್ಷೇತ್ರದಲ್ಲಿ ಬೀಳುತ್ತದೆ, ಅಲ್ಲಿ ಮೇ 25 ರಂದು ಮತದಾನ ನಡೆಯಲಿದೆ.
ಕಳೆದ ಎರಡೂವರೆ ವರ್ಷಗಳಲ್ಲಿ ಪೂಂಚ್ ಪ್ರದೇಶದಲ್ಲಿ ಒಟ್ಟು 6 ಭಯೋತ್ಪಾದಕ ದಾಳಿಗಳು ನಡೆದಿದ್ದು, 21 ಯೋಧರು ಹುತಾತ್ಮರಾಗಿದ್ದಾರೆ. ಕಳೆದ 6 ತಿಂಗಳಲ್ಲಿ ಇದು ಮೂರನೇ ದಾಳಿಯಾಗಿದೆ.
Tags
ಪ್ರಮುಖ ಸುದ್ದಿಗಳು