ತುಂಬಿ ಹರಿಯುತ್ತಿರುವ ಮಳೆನೀರು ಚರಂಡಿಗೆ ಆಟೋ ಬಿದ್ದು ಚಾಲಕ ಸಾವು

ಶುಕ್ರವಾರ ರಾತ್ರಿ ಮತ್ತು ಶನಿವಾರ ಮುಂಜಾನೆ ದಕ್ಷಿಣ ಕನ್ನಡದ ವಿವಿಧೆಡೆ ಮಳೆಯಾಗಿದೆ.



ಮಂಗಳೂರು: ಮಂಗಳೂರಿನ ಕೊಟ್ಟಾರ ಸಮೀಪದ ಅಬ್ಬಕ್ಕ ನಗರದಲ್ಲಿ ಶುಕ್ರವಾರ ತಡರಾತ್ರಿ ತುಂಬಿ ಹರಿಯುತ್ತಿದ್ದ ಮಳೆನೀರು ಚರಂಡಿಗೆ ಆಟೊ ಬಿದ್ದು ಆಟೊರಿಕ್ಷಾ ಚಾಲಕ ಮೃತಪಟ್ಟಿದ್ದಾರೆ.
ಮೃತನನ್ನು ದೀಪಕ್ ಎಂದು ಪೊಲೀಸರು ಗುರುತಿಸಿದ್ದಾರೆ. ಭಾರೀ ಮಳೆಗೆ ರಸ್ತೆಯಲ್ಲೇ ಇದ್ದ ಮಳೆನೀರು ಚರಂಡಿ ತುಂಬಿ ಹರಿಯುತ್ತಿದ್ದು, ಆಟೋ ಅದರಲ್ಲಿ ಬಿದ್ದಿದೆ.
ಏತನ್ಮಧ್ಯೆ, ದಕ್ಷಿಣ ಕನ್ನಡದ ವಿವಿಧೆಡೆ ಶುಕ್ರವಾರ ರಾತ್ರಿ ಮತ್ತು ಶನಿವಾರ ಮುಂಜಾನೆ ಮಳೆ ಮುಂದುವರಿದಿದೆ. ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು.
ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವು ತನ್ನ ಮುನ್ಸೂಚನೆಯಂತೆ ದಕ್ಷಿಣ ಕನ್ನಡದಲ್ಲಿ ಶನಿವಾರ ಹಳದಿ ಅಲರ್ಟ್ ಘೋಷಿಸಿದೆ.
ಮೇ 30 ರವರೆಗೆ ರಾಜ್ಯದ ಕರಾವಳಿ ಜಿಲ್ಲೆಗಳಲ್ಲಿ ಅಲ್ಲಲ್ಲಿ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಮುನ್ಸೂಚನೆ ನೀಡಿದೆ.

ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು