ಅನುದಾನಿತ ಪ್ರೌಢಶಾಲಾ ಖಾಲಿ ಹುದ್ದೆ ಭರ್ತಿ

ಕರ್ನಾಟಕ ಸರ್ಕಾರದ ನಡವಳಿಗಳು

ವಿಷಯ:

ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜುಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಖಾಲಿ ಇರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡುವ ಬಗ್ಗೆ,

ಓದಲಾಗಿದೆ:

 

• ಸರ್ಕಾರದ ಆದೇಶ ಸಂಖ್ಯೆ: ಇಪಿ 14 ಎಸ್‌ಇಪಿ 2017, 2: 29.06.2017, 25.09.2017 06.03.2019

• ನಿರ್ದೇಶಕರು (ಪ್ರೌಢ ಶಿಕ್ಷಣ), ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರುರವರ ಪತ್ರ ಸಂಖ್ಯೆ:ಸಿ8(1)ಶಾಶಿಅಖಾ ಹುಮಾ67/2021-22, 2: 20.09.2022.

• ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಧಾರವಾಡರವರ ಪತ್ರ ಸಂಖ್ಯೆ:ಜಿ13:ಶಾಶಿಅ:ಖಾಹುಭ:03:2020-21/1148, 2:21.02.2022.

• ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರಗಿರವರ ಪತ್ರ ಸಂಖ್ಯೆ:ಸಿ4(6):ಖಾಪ್ರೌಶಾ:ಅಅನೇ:ಇತರೆ:2021-22/2075, 2:21.02.2022

ಪ್ರಸ್ತಾವನೆ:

ಮೇಲೆ ಓದಲಾದ ಕ್ರಮಾಂಕ (1) ರ ಸರ್ಕಾರದ ಆದೇಶ ಸಂಖ್ಯೆ: ಇಡಿ 77 ಎಸ್‌ಇಪಿ 2007 (ಭಾಗ) ದಿನಾಂಕ:31-03-2008 ರಲ್ಲಿ ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 401 ಖಾಲಿ ಹುದ್ದೆಗಳನ್ನು ತುಂಬಲು ಅನುಮತಿ ನೀಡಲಾಗಿದ್ದು, ಈ ಪೈಕಿ ವಿವಿಧ ಕಾರಣದಿಂದ ತುಂಬದೇ ಬಾಕಿ ಇರುವ 189 ಹುದ್ದೆಗಳನ್ನು ಮತ್ತು ದಿನಾಂಕ:01-07-2008 ರ ನಂತರ ನಿಧನ, ನಿವೃತ್ತಿ, ರಾಜಿನಾಮೆ, ಸಕ್ಷಮ ಪ್ರಾಧಿಕಾರದಿಂದ ಅನುಮೋದಿತವಾದ ಬಡ್ತಿ ಮೂಲಕ ತೆರವಾದ ಮತ್ತು ಇತರ ಕಾರಣಗಳಿಂದ ತೆರವಾದ ಬೋಧಕ ಹುದ್ದೆಗಳನ್ನು ತುಂಬಲು ಷರತ್ತುಗಳಿಗೊಳಪಟ್ಟು ಆರ್ಥಿಕ ಮಿತವ್ಯಯ ಆದೇಶವನ್ನು ಸಡಿಲಿಸಿ, ಅನುಮತಿ ನೀಡಲಾಗಿತ್ತು.

ಮೇಲೆ ಓದಲಾದ ಕ್ರಮಾಂಕ (2) ರಲ್ಲಿ ಖಾಸಗಿ ಅನುದಾನಿತ ಪ್ರೌಢ ಶಾಲೆಗಳಲ್ಲಿ ನಿವೃತ್ತಿ, ರಾಜೀನಾಮೆ, ಮರಣ ಇತರೆ ಕಾರಣಗಳಿಂದ ಖಾಲಿಯಾದ ಬೋಧಕ ಹುದ್ದೆಗಳನ್ನು ಸೂಕ್ತ ಪ್ರಾಧಿಕಾರದ ಅನುಮೋದನೆ ಪಡೆದು ಬಡ್ತಿ ಹೊಂದಿರುವ ಹಾಗೂ ಇತರೆ ಕಾರಣಗಳಿಂದ ದಿನಾಂಕ:31.12.2012 ರವರೆಗೆ ಖಾಲಿಯಾದ ಹುದ್ದೆಗಳನ್ನು ಹೆಚ್ಚುವರಿ ಪುಕ್ರಿಯೆಯಲ್ಲಿ ಬಳಸಿಕೊಂಡು ನಂತರ ಬಾಕಿ ಉಳಿದ ಬೋಧಕ ಹುದ್ದೆಗಳನ್ನು ಹಾಗೂ

2:01.01.2013 00 31.12.2014 01.01.2015 31.12.2015 ರವರೆಗೆ ಖಾಲಿಯಾದ ಬೋಧಕ ಹುದ್ದೆಗಳನ್ನು ಹೆಚ್ಚುವರಿ ಪ್ರಕ್ರಿಯೆಯಲ್ಲಿ ಬಳಸಿಕೊಂಡ ನಂತರ ಬಾಕಿ ಉಳಿದ ಬೋಧಕ ಹುದ್ದೆಗಳನ್ನು (ವೃತ್ತಿ / ಚಿತ್ರಕಲಾ / ಸಂಗೀತ ಹಾಗೂ ಮುಂತಾದ ವಿಶೇಷ ಶಿಕ್ಷಕರನ್ನು ಹೊರತುಪಡಿಸಿ) ಭರ್ತಿ ಮಾಡುವ ಷರತ್ತಿಗೊಳಪಟ್ಟು ಆರ್ಥಿಕ ಮಿತ್ಯವ್ಯಯ ಸಡಿಲಿಸಿ ಅನುಮತಿ ನೀಡಲಾಗಿತ್ತು.

ಮೇಲೆ ಓದಲಾದ ಕ್ರಮಾಂಕ (3), (4) ಮತ್ತು (5) ರನ್ವಯ ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆಗಳಲ್ಲಿ ದಿನಾಂಕ:01.01.2016 ರಿಂದ ದಿನಾಂಕ:31.12.2020 ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಇತರೆ ಕಾರಣಗಳಿಂದ ತೆರವಾಗಿರುವ ಖಾಲಿ ಇರುವ ಬೋಧಕ ಹುದ್ದೆಗಳನ್ನು ಆರ್ಥಿಕ ಮಿತವ್ಯಯ ಸಡಿಲಿಸಿ ಭರ್ತಿ ಮಾಡಲು ಅನುಮತಿ ನೀಡುವಂತೆ ಕೋರಿರುತ್ತಾರೆ.

ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ ಮತ್ತು ಧಾರವಾಡ ಹಾಗೂ ನಿರ್ದೇಶಕರು [ಪ್ರೌಢ], ಬೆಂಗಳೂರು ರವರು ಸಲ್ಲಿಸಿರುವ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಲಾಯಿತು. ಅದರಂತೆ ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರದ ಆದೇಶ ಸಂಖ್ಯೆ:ಇಪಿ 396 ಎಸ್‌ಇಎಸ್ 2021 ಬೆಂಗಳೂರು, 2:07.08.2024

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, 1994-95 ರ ಶೈಕ್ಷಣಿಕ ಅವಧಿಗೆ ಪೂರ್ವದಲ್ಲಿ ಪ್ರಾರಂಭಗೊಂಡು ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಅನುದಾನಿತ ಪ್ರೌಢಶಾಲೆಗಳು, ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ ದಿನಾಂಕ:01.01.2016 ರಿಂದ ದಿನಾಂಕ: 31.12.2020 ರವರೆಗೆ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಮತ್ತಿತರ ಕಾರಣಗಳಿಂದ ಖಾಲಿಯಾಗಿರುವ ಬೋಧಕ ಹುದ್ದೆಗಳನ್ನು ಈ ಕೆಳಕಂಡ ಷರತ್ತಿಗಳಿಗೊಳಪಟ್ಟು ಭರ್ತಿ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಿದೆ. ಮಾಡಿಕೊಳ್ಳಲು ಸರ್ಕಾರವು

ಷರತ್ತುಗಳು:

1. ಹುದ್ದೆಗಳನ್ನು ಭರ್ತಿ ಮಾಡಿಕೊಂಡ ನಂತರ ನೇಮಕಾತಿ ಅನುಮೋದನೆಗಾಗಿ ಆರ್ಥಿಕ ಇಲಾಖೆಯ ಅನಧಿಕೃತ ಟಿಪ್ಪಣಿ ಸಂಖ್ಯೆ:ಆಇ 384 ವೆಚ್ಚ-8/2013, ದಿನಾಂಕ: 09.04.2013 ರಲ್ಲಿನ ಚೆಕ್‌ಲಿಸ್ಟ್ ಅನುಬಂಧ-3ರ ಯ ಸಂಪೂರ್ಣ ಮಾಹಿತಿ/ದಾಖಲೆಗಳೊಂದಿಗೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುವುದು.

2. ಮೇಲ್ಕಂಡಂತೆ ಖಾಲಿ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಸಂದರ್ಭದಲ್ಲಿ ಜಾರಿಯಲ್ಲಿರುವ ಅನುದಾನ ಸಂಹಿತೆ ಮತ್ತು ಸರ್ಕಾರದ ಆದೇಶ ಮತ್ತು ಸುತ್ತೋಲೆಗಳ ನಿಯಮಗಳನ್ನು ಪಾಲಿಸಿರುವುದನ್ನು ಖಚಿತಪಡಿಸಿಕೊಳ್ಳವುದು.

3.ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಾಗ ನಿಯಮಾನುಸಾರ ರೋಸ್ಟರ್ ಬಿಂದು ಮತ್ತು ಕಲ್ಯಾಣ ಕರ್ನಾಟಕದ ಮೀಸಲಾತಿಗಳನ್ನು ಕಡ್ಡಾಯವಾಗಿ ಪಾಲಿಸತಕ್ಕದ್ದು.

4. 2016-17 ರಿಂದ 2023-24ನೇ ಸಾಲಿನವರೆಗೆ ವಿದ್ಯಾರ್ಥಿಗಳ ದಾಖಲಾತಿ, ಪರೀಕ್ಷಾ ಫಲಿತಾಂಶ ಮತ್ತು ಮೂಲಭೂತ ಸೌಕರ್ಯಗಳು ಉತ್ತಮವಾಗಿರುವುದನ್ನು ಖಚಿತಪಡಿಸಿಕೊಳ್ಳುವುದು.

5. ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವ ಶಾಲಾ/ಕಾಲೇಜುಗಳು ಪ್ರಾರಂಭವಾದಾಗಿನಿಂದ ಅವಿಚ್ಛಿನ್ನವಾಗಿ ನಡೆಯುತ್ತಿರುವುದನ್ನು ಖಚಿತಪಡಿಸಿಕೊಳ್ಳಬೇಕು.

6. ಅನುದಾನಿತ ಶಾಲೆಗಳು ಮತ್ತು ಕಾಲೇಜುಗಳು ಆನ್‌ಲೈನ್ ಮೂಲಕ ವಿವರಗಳು ಮತ್ತು ದಾಖಲೆಗಳನ್ನು ಸಲ್ಲಿಸಲು ತಂತ್ರಾಂಶವನ್ನು ಅಭಿವೃದ್ಧಿಪಡಿಸುವುದು. ಈ ತಂತ್ರಾಂಶದ ಮೂಲಕ ಪ್ರಸ್ತಾವನೆಗಳನ್ನು ವ್ಯವಹರಿಸುವುದು.

7. ಅನುದಾನಿತ ಪದವಿಪೂರ್ವ ಕಾಲೇಜುಗಳಲ್ಲಿನ ಹುದ್ದೆಗಳನ್ನು ಅನುಮೋದಿಸಲು ಪ್ರತ್ಯಾಯೋಜಿಸಲಾದ ಆದೇಶ ಸಂಖ್ಯೆ: ಇಡಿ 16 టిప్రియు 2011, ದಿನಾಂಕ:30.09.2011 ಅನ್ನು ಹಿಂಪಡೆಯಲಾಗಿದ್ದು, ಹುದ್ದೆಗಳ ಅನುಮೋದನೆಗಾಗಿ ಸರ್ಕಾರಕ್ಕೆ ಪ್ರಸ್ತಾವನೆಗಳನ್ನು ಸಲ್ಲಿಸುವುದು.

ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ:ಆಇ 880 ವೆಚ್ಚ-8/2022 2: 31.07.2024 5 ಹೊರಡಿಸಿದೆ. 06.08.202400

ಇವರಿಗೆ:

1. ಮಹಾಲೇಖಪಾಲರು (ಎ & ಇ), ಕರ್ನಾಟಕ ಬೆಂಗಳೂರು,

2. ಅಪರ ಮುಖ್ಯ ಕಾರ್ಯದರ್ಶಿ, ಆರ್ಥಿಕ ಇಲಾಖೆ, ವಿಧಾನಸೌಧ, ಬೆಂಗಳೂರು.

3. ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು.

4. ನಿರ್ದೇಶಕರು, ಶಾಲಾ ಶಿಕ್ಷಣ (ಪದವಿ ಪೂರ್ವ), ಮಲ್ಲೇಶ್ವರಂ, ಬೆಂಗಳೂರು.

5. ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ / ಧಾರವಾಡ.

6. ನಿರ್ದೇಶಕರು (ಪ್ರೌಢ ಶಿಕ್ಷಣ) ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು.

7. ಸರ್ಕಾರದ ಜಂಟಿ ಕಾರ್ಯದರ್ಶಿಗಳು, ಆರ್ಥಿಕ ಇಲಾಖೆ, ವಿಧಾನಸೌಧ, ಬೆಂಗಳೂರು

8. ಎಲ್ಲಾ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು (ಆಯುಕ್ತರ /ಅಪರ ಆಯುಕ್ತರ ಮೂಲಕ)

9. ಎಲ್ಲಾ ಜಿಲ್ಲೆಗಳ ಉಪ ನಿರ್ದೇಶಕರುಗಳು, ಶಾಲಾ ಶಿಕ್ಷಣ ಇಲಾಖೆ (ಆಯುಕ್ತರ /ಅಪರ ಆಯುಕ್ತರುಗಳ ಮೂಲಕ).

10. ಶಾಖಾ ರಕ್ಷ ಕಡತ/ಹೆಚ್ಚುವರಿ ಪ್ರತಿಗಳು.

ಪ್ರತಿಗಳು :-

1. ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರ ಆಪ್ತ ಕಾರ್ಯದರ್ಶಿಗಳು, ವಿಧಾನಸೌಧ, ಬೆಂಗಳೂರು.

2. ಸರ್ಕಾರದ ಪ್ರಧಾನ ಕಾರ್ಯದರ್ಶಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ರವರ ಆಪ್ತ ಕಾರ್ಯದರ್ಶಿ, ಬಹುಮಹಡಿಗಳ ಕಟ್ಟಡ, ಬೆಂಗಳೂರು.

3. ಸರ್ಕಾರದ ವಿಶೇಷ ಕಾರ್ಯದರ್ಶಿರವರ ಆಪ್ತ ಸಹಾಯಕರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಬಹುಮಹಡಿ ಕಟ್ಟಡ, ಬೆಂಗಳೂರು👇




ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು