ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿ ಆಹ್ವಾನ SSLC ,PUC


ಸುದ್ದಿ



ಪತ್ರಿಕಾ ಪ್ರಕಟಣೆ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ

2024-25ನೇ ಸಾಲಿನ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು 2024-25ನೇ ಶೈಕ್ಷಣಿಕ ಸಾಲಿನಲ್ಲಿ SSLC ಮತ್ತು PUC ರಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳನ್ನು ಪ್ರೋತ್ಸಾಹಿಸಲು ಪ್ರತಿಭಾ ಪುರಸ್ಕಾರಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಿದೆ.

ಪ್ರತಿಭಾ ಪುರಸ್ಕಾರಕ್ಕಾಗಿ ಮಂಡಳಿಯ ವೆಬ್ಸೈಟ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅರ್ಹತೆ:

1. 2024-25ನೇ ಶೈಕ್ಷಣಿಕ ವರ್ಷದ 2025ರಲ್ಲಿ ನಡೆದ ಪರೀಕ್ಷೆಯಲ್ಲಿ SSLC ಮತ್ತು PUC ಪರೀಕ್ಷೆಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಶೇ. 90 ಕ್ಕಿಂತ ಹೆಚ್ಚು ಅಂಕಗಳನ್ನು ಪಡೆದು ತೇರ್ಗಡೆಯಾಗಿರಬೇಕು.

2. SSLC ಪರೀಕ್ಷೆಗೆ ಸಂಬಂಧಿಸಿದಂತೆ ಫಲನುಭವಿಯು ದಿನಾಂಕ: 02-05-2025 ರ ಪೂರ್ವದಲ್ಲಿ ಮಂಡಳಿಯಲ್ಲಿ ನೋಂದಣಿಯಾಗಿರಬೇಕು.

3. PUC ಪರೀಕ್ಷೆಗೆ ಸಂಬಂಧಿಸಿದಂತೆ ಫಲನುಭವಿಯು ದಿನಾಂಕ: 08-04-2025 ರ ಪೂರ್ವದಲ್ಲಿ ಮಂಡಳಿಯಲ್ಲಿ ನೋಂದಣಿಯಾಗಿರಬೇಕು.

ಅರ್ಜಿ ಸಲ್ಲಿಸಲು ಅಂತಿಮ ದಿನಾಂಕ: 15/09/2025

ಅರ್ಜಿ ಸಲ್ಲಿಸುವ ವೆಬ್ಸೈಟ ವಿಳಾಸ : https://karbwwb.karnataka.gov.in/

ಹೆಚ್ಚಿನ ಮಾಹಿತಿಗಾಗಿ ಕಾರ್ಮಿಕ ಸಹಾಯವಾಣಿ 155214 ಅನ್ನು ಸಂಪರ್ಕಿಸಬುದು

ಅರ್ಹ ಫಲಾನುಭವಿಗಳು ಈ ಸೌಲಭ್ಯದ ಸದುಪಯೋಗ ಪಡಿಸಿಕೊಳ್ಳಬೇಕಾಗಿ ಈ ಮೂಲಕ ಕೋರಲಾಗಿದೆ.



ಶ್ರೀ ಮಲ್ಲಪ್ಪ ಪಟ್ಟಣಶೆಟ್ಟಿ

ಈ ಜಾಲತಾಣವು ಸಮಾಜದ ಎಲ್ಲ ವರ್ಗದವರಿಗೆ ವಿವಿಧ ರೀತಿಯ ಉಪಯುಕ್ತ ವಿಷಯ, ಮಾಹಿತಿಗಳನು ತಿಳಿಸಲು ಹಾಗು ಸಾಮಾನ್ಯ ಜ್ಞಾನವನ್ನು ಹೆಚ್ಚಿಸುವ ಸಾಮಾಜಿಕ ಮಾಧ್ಯಮ ವಾಗಿದೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

ನವೀನ ಹಳೆಯದು